×
Ad

ಉಪ್ಪಿನಂಗಡಿ: ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಓರ್ವ ಮೃತ್ಯು, ಮತ್ತೋರ್ವ ಗಂಭೀರ

Update: 2023-06-11 09:52 IST

ಉಪ್ಪಿನಂಗಡಿ: ಸೇತುವೆಯಿಂದ ಕಾರು ಹೊಳೆಗೆ ಬಿದ್ದು ಓರ್ವ ಮೃತಪಟ್ಟು,  ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಭಾನುವಾರ ಬೆಳಗಿನ ಜಾವ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ  ಸಂಭವಿಸಿರುವ ಬಗ್ಗೆ ವರದಿಯಾಗಿದೆ.

ಮೃತಪಟ್ಟವರನ್ನು ತಮಿಳುನಾಡಿನ ಹೊಸೂರು ಮೂಲದ ಹರಿಪ್ರಸಾದ್ (50), ಗಾಯಗೊಂಡವನನ್ನು ಗೋಪಿ (48) ಎಂದು ಗುರುತಿಸಲಾಗಿದೆ. ಕಾರು ಹೊಸೂರಿನಿಂದ ಮಂಗಳೂರು ಕಡೆಗೆ ಬರುತ್ತಿತ್ತು ಎನ್ನಲಾಗುತ್ತಿದೆ.

ಗಾಯಾಳುವಿಗೆ ನೆಲ್ಯಾಡಿಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಳಗೆ ಬಿದ್ದಿರಬಹುದೆಂದು ಪ್ರಾಥಮಿಕ ವರದಿಯಲ್ಲಿ ಹೇಳಲಾಗಿದೆ.

ಸ್ಥಳೀಯ ಪರಶುರಾಮ ಕ್ರೇನ್ ತಂಡ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಕಾರು ಮೇಲೆತ್ತುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸ್ಥಳದಲ್ಲಿ ನೆಲ್ಯಾಡಿ ಹೊರಠಾಣಾ ಸಿಬ್ಬಂದಿ, ಉಪ್ಪಿನಂಗಡಿ ಠಾಣಾಧಿಕಾರಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Similar News