ಉಚಿತ ಬಸ್ ಪ್ರಯಾಣ ‘ಶಕ್ತಿ’ ಯೋಜನೆಗೆ ಇಂದು ಚಾಲನೆ
Update: 2023-06-11 10:46 IST
ಬೆಂಗಳೂರು: ಕಾಂಗ್ರೆಸ್ ನ ಚುನಾವಣಾ ಪ್ರಣಾಳಿಕೆಯ ಐದು ‘ಗ್ಯಾರಂಟಿ’ಗಳಲ್ಲೊಂದಾದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ‘ಶಕ್ತಿ’ ಯೋಜನೆ ಗೆ ರಾಜ್ಯದಾದ್ಯಂತ ಸರ್ಕಾರ ಇಂದು ಚಾಲನೆ ದೊರಕಲಿದೆ.
ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 1.00 ಗಂಟೆಯ ನಂತರ ಎಲ್ಲ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ಈ ಸೌಲಭ್ಯ ಸಿಗಲಿದೆ ಎಂದು ಸರಕಾರಿ ಮೂಲಗಳು ತಿಳಿಸಿವೆ.
ಆಯಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸ್ಥಳೀಯ ಶಾಸಕರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.