ನಮ್ಮ ಸರ್ಕಾರದಲ್ಲಿ ಯಾವುದೇ ರೀತಿಯ ದುರ್ಬಳಕೆಗೆ ಅವಕಾಶವಿಲ್ಲ: ಸಂತೋಷ್ ಲಾಡ್
ಹುಬ್ಬಳ್ಳಿ: ನಾವು ಚುನಾವಣಾ ಮುನ್ನ ನೀಡಿದ ಐದು ಗ್ಯಾರಂಟಿಗಳಲ್ಲಿ ಒಂದನ್ನು ಇಂದು ಜಾರಿ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಶಕ್ತಿ ಯೋಜನೆ ಚಾಲನೆ ಸಿಗಲಿದೆ. ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆಯ ಡಿ ಮಹಿಳೆಯರಿಗೆ ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣ ಕ್ಕೆ ವ್ಯವಸ್ಥೆ ಮಾಡಲಾಗಿದ್ದು, ರಾಜ್ಯದ ಎಲ್ಲ ಕಡೆಗಳಲ್ಲಿ ಏಕಕಾಲಕ್ಕೆ ಚಾಲನೆ ಸಿಗಲಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಉಳಿದ ಗ್ಯಾರಂಟಿ ಜಾರಿ ಮಾಡಲಾಗುವುದು. ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕರ ಕಲ್ಯಾಣ ಹಣ ಬಳಕೆಗೆ ಮುಂದೆ ಕ್ರಮ ವಹಿಸಲಾಗುವುದು. ಹಿಂದಿನ ಸರ್ಕಾರದಲ್ಲಿ ಇದರ ಬಳಕೆ ಕಡಿಮೆ ಆಗಿರಬಹುದು. ನಾವು ಇನ್ನೂ ಮುಂದೆ ಬಳಕೆ ಮಾಡುತ್ತೇವೆ. ನಮ್ಮ ಸರ್ಕಾರದಲ್ಲಿ ಯಾವುದೇ ರೀತಿಯ ದುರ್ಬಳಕೆಗೆ ಅವಕಾಶವಿಲ್ಲ. ಕಾರ್ಮಿಕ ಇಲಾಖೆಯಲ್ಲಿನ ಮುಂದಿನ ಯೋಜನೆ ಜಾರಿ ಕುರಿತು ಮುಂದೆ ಸವಿಸ್ತಾರವಾಗಿ ಹೇಳುವೆ ಎಂದು ತಿಳಿಸಿದರು.