‘ಶಕ್ತಿʼ ಯೋಜನೆಗೆ ಸಿ ಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ
ಶಕ್ತಿ ಯೋಜನೆಯ ಲೋಗೋ ಬಿಡುಗಡೆ
ಬೆಂಗಳೂರು: ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಲ್ಲೊಂದಾದ ‘ಶಕ್ತಿʼ ಯೋಜನೆಗೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಯ ಲೋಗೋ ಬಿಡುಗಡೆಗೊಳಿಸುವ ಮೂಲಕ ಅಧಿಕೃತ ಚಾಲನೆ ನೀಡಿದ್ದಾರೆ.
ಮಧ್ಯಾಹ್ನ 1.00 ಗಂಟೆಯ ನಂತರ ಮಹಿಳಾ ಪ್ರಯಾಣಿಕರಿಗೆ ಈ ಸೌಲಭ್ಯ ದೊರೆಯಲಿದ್ದು, ಈ ಮೂಲಕ ಸಿದ್ದರಾಮಯ್ಯ ಅವರು ಮಹಿಳಾ ಸಬಲೀಕರಣದತ್ತ ಹೊಸ ಹೆಜ್ಜೆಗೆ ಮುನ್ನುಡಿ ಬರೆದಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿಗಳು ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಸ್ಮಾರ್ಟ್ ಕಾರ್ಡ್ ಮಾದರಿ ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ,ಇಂಧನ ಸಚಿವ ಕೆ ಜೆ ಜಾರ್ಜ್, ಕಂದಾಯ ಸಚಿವ ಕೃಷ್ಣ ಬೈರೇಗೌಡ,ಶಾಸಕ ರಿಜ್ವಾನ್ ಅರ್ಷದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹಾಗೂ ಇತರ ಕಾಂಗ್ರೆಸ್ ನಾಯಕರು ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯ ಉದ್ಘಾಟನಾ ಸಮಾರಂಭದ ನೇರಪ್ರಸಾರ. https://t.co/h8OM64K3lq
— Siddaramaiah (@siddaramaiah) June 11, 2023