ಮಂಗಳೂರು: ರೌಡಿಶೀಟರ್‌ಗಳ ಮನೆಗಳಲ್ಲಿ ತಪಾಸಣೆ
Update: 2023-06-11 22:11 IST
ಮಂಗಳೂರು, ಜೂ.11: ದ.ಕ. ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯಲ್ಲಿ 83 ರೌಡಿ ಶೀಟರ್‌ಗಳ ಮನೆಗಳಲ್ಲಿ ರವಿವಾರ ದಿಢೀರ್ ತಪಾಸಣೆ ನಡೆಸಲಾಗಿದೆ ಎಂದು ಜಿಲ್ಲಾ ಎಸ್ಪಿ ಮಾಹಿತಿ ನೀಡಿದ್ದಾರೆ.
ಅಕ್ರಮ ಆಯುಧಗಳ ಬಗ್ಗೆ ಶೋಧ ನಡೆಸಿ ಯಾವುದೇ ರೌಡಿ ಚಟುವಟಿಕೆ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.