ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ರಿಗೆ ಇನಾಯತ್ ಅಲಿ ಮನವಿ
Update: 2023-06-11 23:01 IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಪ್ರಥಮ ಬಾರಿಗೆ ಇಂದು ಮಂಗಳೂರಿಗೆ ಆಗಮಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿಯಾಗಿ ಅಭಿನಂದಿಸಿದರು.
ಈ ಸಂದರ್ಭ ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರದೇಶದಲ್ಲಿ ಕೃತಕ ನೆರೆ ಉಂಟಾಗುವ ವಿಚಾರವಾಗಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ, ಅಧಿಕಾರಿಗಳಿಗೆ ಸೂಚಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರು.