×
Ad

ಕೃಷಿ ಕಾಯ್ದೆ ತಿದ್ದುಪಡಿ ಹಿಂಪಡೆಯಲು ಚರ್ಚೆ: ಸಚಿವ ಚಲುವರಾಯಸ್ವಾಮಿ

Update: 2023-06-12 21:57 IST

ಧಾರವಾಡ, ಜೂ. 12: ಕೇಂದ್ರ ಸರಕಾರದ ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ವಿಚಾರವಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಚರ್ಚೆ ನಡೆಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಗಿಂತ ಈ ಬಾರಿ ಮುಂಗಾರು ಮಳೆ ಶೇ.37ರಷ್ಟು ಕಡಿಮೆ ಆಗಿದೆ. ಇವತ್ತು ಅಥವಾ ನಾಳೆ ನಂತರ ಮುಂಗಾರು ಆಗಮನವಾಗುವ ಸಾಧ್ಯತೆ ಇದ್ದು, ಕೃಷಿ ಚಟುವಟಿಕೆಗಳನ್ನು ಮಾಡಲು ಬೀಜ ಮತ್ತು ಗೊಬ್ಬರ ನಮ್ಮ ಬಳಿ ಶೇಖರಿಸಲಾಗಿದೆ.ಶೀಘ್ರದಲ್ಲಿಯೇ ರಾಜ್ಯದಲ್ಲಿ ಮೋಡ ಬಿತ್ತನೆ ಆರಂಭವಾಗಲಿದೆ ಎಂದರು.

ಕೃಷಿ ಸಹ ಉದ್ಯಮ ಎನ್ನುವ ರೀತಿಯಲ್ಲಿ ಮಾಡಬೇಕು. ಅದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳನ್ನು ಸದುಪಯೋಗ ಪಡೆಯಬೇಕು. ಜತೆಗೆ, ಆಧುನಿಕ ತಂತ್ರಜ್ಞಾನ ಬಳಕೆ ಮಾಡಿಕೊಂಡು ಕೃಷಿ ಚಟುವಟಿಕೆಗಳಲ್ಲಿ ಭಾಗಿಯಾಗುವ ಮೂಲಕಲಾಭ ಪಡೆಯಲು ರೈತರು ಮುಂದಾಗಬೇಕು ಎಂದು ಅವರು ಸಲಹೆ ನೀಡಿದರು.

Similar News