×
Ad

ಕಾಪು: ಪೊಲಿಪು ಖುವ್ವತ್ತುಲ್ ಇಸ್ಲಾಂ ಯಂಗ್‌ಮೆನ್ಸ್ ಅಧ್ಯಕ್ಷರಾಗಿ ಆರೀಫ್ ಕಲ್ಯಾ ಪುನರಾಯ್ಕೆ

Update: 2023-06-13 11:55 IST

ಕಾಪು, ಜೂ.13: ಪೊಲಿಪು ಖುವ್ವತ್ತುಲ್ ಇಸ್ಲಾಂ ಯಂಗ್‌ಮೆನ್ಸ್ ಅಸೋಸಿಯೇಶನ್ ಇದರ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಆರೀಫ್ ಕಲ್ಯಾ ಪುನರಾಯ್ಕೆಯಾಗಿದ್ದಾರೆ.

ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಶಾಹಿದ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ನಿಹಾಲ್, ಜೊತೆ ಕಾರ್ಯದರ್ಶಿಯಾಗಿ ರಿಯಾಝ್ ಮಡುಂಬು, ಮುಹಮ್ಮದ್ ಮಶೂಕ್, ಬಾಸಿತ್ ಕಾಪು, ಖಜಾಂಚಿಯಾಗಿ ಜಲೀಲ್ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಈ ಬಾರಿಯ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಪ್ರತಿನಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

Similar News