×
Ad

ಬೆಂಗಳೂರು-ಮೈಸೂರು ದಶಪಥ ರಸ್ತೆ ಟೋಲ್‌ ದರ ಹೆಚ್ಚಳ ಸಮರ್ಥಿಸಿಕೊಂಡ ಸಂಸದ ಪ್ರತಾಪ್ ಸಿಂಹ

Update: 2023-06-13 12:22 IST

ಬೆಂಗಳೂರು: ಬೆಂಗಳೂರು-ಮೈಸೂರು ಹೆದ್ದಾರಿಯ ಟೋಲ್ ದರ ಶೇ.22ರಷ್ಟು ಹೆಚ್ಚಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತೊಮ್ಮೆ ಆದೇಶ ಹೊರಡಿಸಿದೆ. ಜೂನ್ 1ರಿಂದಲೇ ಹೆಚ್ಚಿನ ಶುಲ್ಕ ಅನ್ವಯವಾಗಿದ್ದು, ವಾಹನ ಸವಾರರು ಆಕ್ರೋಶ ಹೊರಹಾಕುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ದಶಪಥ ರಸ್ತೆ ಟೋಲ್‌ ದರ ಮತ್ತೆ ಹೆಚ್ಚಳ

ಟೋಲ್ ದರ ಹೆಚ್ಚಳ ಒಂದು ಕಡೆ ವಾಹನ ಸವಾರ ಆಕ್ರೋಶಕ್ಕೆ ಕಾರಣವಾಗಿದ್ದರೆ, ಬಿಜೆಪಿ ಸಂಸದ ಪ್ರತಾಪ್ ಸಿಂಹ ಇದನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ''ಇಡೀ ದೇಶದಲ್ಲಿ ಆರ್ಥಿಕ ವರ್ಷ ಶುರುವಾದಾಗ ಟೋಲ್ ಹೆಚ್ಚಳ ಸಹಜ. ಈ ಹೈವೆಗೆ ಏಪ್ರಿಲ್ ನಲ್ಲಿ ಟೋಲ್ ಹೆಚ್ಚಳ ಆಗಬೇಕಿತ್ತು. ಆಗ ಆಗಿರಲಿಲ್ಲ. ಈಗ ಶೇ.22ರಷ್ಟು ಏರಿಕೆ ಆಗಿದೆ. ಹಾಗೂ ಟೋಲ್ ಸಂಗ್ರಹದ ಆರಂಭದಲ್ಲಿ ಫಾಸ್ಟ್​​ ಟ್ಯಾಗ್ ಸಮಸ್ಯೆ ಇತ್ತು, ಈಗ ಸಮಸ್ಯೆ ಇಲ್ಲ. ಫಾಸ್ಟ್​ ಟ್ಯಾಗ್ ಇರದಿದ್ದರೆ ಡಬಲ್ ಚಾರ್ಜ್ ಕಟ್ಟುವುದು ಕಡ್ಡಾಯವಾಗಿದೆ'' ಎಂದು ಹೇಳಿದ್ದಾರೆ. 

Similar News