×
Ad

ನಮ್ಮ ಸರಕಾರ ವಿದ್ಯುತ್ ದರ ಹೆಚ್ಚಳ ಮಾಡಿಲ್ಲ: ಮಾಜಿ ಸಿಎಂ ಬೊಮ್ಮಾಯಿ‌

Update: 2023-06-13 14:23 IST

ಹಾವೇರಿ(ಶಿಗ್ಗಾಂವ): ನಮ್ಮ ಕಾಲದಲ್ಲಿ ವಿದ್ಯುತ್ ದರ ಹೆಚ್ಚಳ ಮಾಡಿಲ್ಲ. ಕಾಂಗ್ರೆಸ್ ನಿಂದಲೇ ವಿದ್ಯುತ್ ದರ ಹೆಚ್ಚಳದ ಆಜ್ಞೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಅವರು, ಕೆ‌.ಇ.ಆರ್. ಸಿ ಅದೊಂದು ಸ್ಟೆಚುಟರಿ ಬಾಡಿಯವರು ಮಾರ್ಚ್ ನಲ್ಲಿ ಹೆಚ್ಚಳದ ಪ್ರಸ್ತಾವನೆ ಕೊಟ್ಟರೂ, ನಾವು ಒಪ್ಪಿಗೆ ಕೊಟ್ಟಿರಲಿಲ್ಲ. ನಾವು ವಿದ್ಯುತ್ ದರ್ ಹೆಚ್ಚಳದ ಯಾವುದೇ ಆದೇಶ ಮಾಡಿಲ್ಲ. ಕಾಂಗ್ರೆಸ್ ನವರು ಬಂದ ಮೇಲೆಯೇ ವಿದ್ಯುತ್ ದರ ಹೆಚ್ಚಳ ಮಾಡಿದ್ದಾರೆ. ಅವರ ಆಜ್ಞೆಯಿಂದಲೇ ವಿದ್ಯುತ್ ದರ ಹೆಚ್ಚಳ ಆಗಿದೆ ಎಂದರು. 

ಏಪ್ರೀಲ್ ನಿಂದ ವಿದ್ಯುತ್ ದರ ಹೆಚ್ಚಳ ಮಾಡಿದ್ದಾರೆ. ಇದು ಬಹಳ ದೊಡ್ಡ ಭಾರ ಇದೆ. ಬರುವ ದಿನಗಳಲ್ಲಿ ಎಲೆಕ್ಟ್ರಿಸಿಟಿ ಕ್ಷೇತ್ರ ಬಹಳ ಸಂಕಷ್ಟಕ್ಕೆ ಈಡಾಗಲಿದೆ. ಸಾರಿಗೆ ಹಾಗೂ ವಿದ್ಯುತ್ ಕ್ಷೇತ್ರಗಳಗೆ ಹಣ ಕೊಡಬೇಕು. ಒಂದು ವರ್ಷ ಬಿಟ್ಟು  ಸಬ್ಸಿಡಿ ಕೊಟ್ಟರೆ ಆಗಲ್ಲ. ಮುಂಗಡವಾಗಿ ಸಬ್ಸಿಡಿ ಕೊಡಬೇಕು ಎಂದರು.

ರಾಜ್ಯದ ಶಾಲಾ ಮಕ್ಕಳಿಗೆ ಸ್ಕೂಲ್ ಬಸ್ ಕೊಡಬೇಕು. ಶಾಲಾ ಮಕ್ಕಳ ಸುರಕ್ಷತೆ ಆಗುತ್ತದೆ. ಈಗಾಗಲೇ ನಾವಯ ಆಜ್ಞೆ ಕೂಡ ಮಾಡಿದ್ದೇವೆ. ಇದಕ್ಕೆ ಬಜೆಟ್ ನಲ್ಲಿ  ಹಣ ಕೂಡ ಇಟ್ಟಿದ್ದೇವೆ. ಸಾರಿಗೆ ಹಾಗೂ ವಿದ್ಯುತ್ ಕ್ಷೇತ್ರಗಳಿಗೆ ಸರಿಯಾಗಿ ಹಣ ಕೊಟ್ಟು ನಿರ್ವಹಿಸದೇ ಇದ್ದರೆ, ಸಾರಿಗೆ ಸ್ಥಗಿತ ಆಗುವುದು, ವಿದ್ಯುತ್ ಶಕ್ತಿ ನಿಲ್ಲುವುದು ಗ್ಯಾರಂಟಿ ಆಗುತ್ತದೆ ಎಂದು ಮಾಜಿ ಸಿಎಂ ಬೊಮ್ಮಾಯಿ‌ ಆತಂಕ ವ್ಯಕ್ತಪಡಿಸಿದರು.

Similar News