×
Ad

ಜಮ್ಮು –ಕಾಶ್ಮೀರದ ನಿಯಂತ್ರಣ ರೇಖೆ ಬಳಿ ಇಬ್ಬರು ಉಗ್ರರ ಹತ್ಯೆ

Update: 2023-06-13 14:55 IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನಲ್ಲಿ ಈ ಘಟನೆ ನಡೆದಿದೆ.

"ಕುಪ್ವಾರಾ ಜಿಲ್ಲೆಯ ದೋಬನಾರ್ ಮಚ್ಚಲ್ ಪ್ರದೇಶದಲ್ಲಿ (ಎಲ್‌ಒಸಿ) ಸೇನೆ ಹಾಗೂ  ಕುಪ್ವಾರಾ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು  ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಹುಡುಕಾಟ ಇನ್ನೂ ಮುಂದುವರೆದಿದೆ" ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಸೇನೆ ಹಾಗೂ  ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Similar News