×
Ad

ಭೀಕರ ಅಪಘಾತ: ರಾಸಾಯನಿಕ ಸಾಗಿಸುತ್ತಿದ್ದ ಟ್ಯಾಂಕರ್‌ ಸ್ಪೋಟ; ನಾಲ್ವರು ಸಾವು

Update: 2023-06-13 18:53 IST

ಪುಣೆ: ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ರಾಸಾಯನಿಕ ಹೊತ್ತು ಸಾಗಿಸುತ್ತಿದ್ದ ಟ್ಯಾಂಕರ್‌ಗೆ ಬೆಂಕಿ ಹೊತ್ತಿಕೊಂಡು ನಾಲ್ವರು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ಅಪಘಾತದಲ್ಲಿ ಇನ್ನೂ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೋನಾವಾಲಾ ಮತ್ತು ಖಂಡಾಲಾ ನಡುವಿನ ಎಕ್ಸ್‌ಪ್ರೆಸ್‌ವೇ ಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತದ ನಂತರ ಟ್ಯಾಂಕರ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ರಾಸಾಯನಿಕದ ಉರಿಯುತ್ತಿರುವ ಬೆಂಕಿ ಚೆಂಡುಗಳು ಕೆಳಗಿನ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ವಾಹನ ಸವಾರರ ಮೇಲೆ ಬಿದ್ದಿವೆ ಎಂದು ಪೊಲೀಸರು ತಿಳಿಸಿದ್ದಾರೆ. 

ಕೆಳಗಿನ ರಸ್ತೆಯಲ್ಲಿದ್ದ ವಾಹನ ಚಾಲಕರಲ್ಲಿ ಮೂವರು ಸಾವನ್ನಪ್ಪಿದ್ದಾರೆ, ಟ್ಯಾಂಕರ್‌ನಲ್ಲಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಟ್ಯಾಂಕರ್‌ ಜೊತೆ ಅಪಘಾತಕ್ಕೀಡಾದ ವಾಹನದಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ ಎಂದು ಲೋನಾವಾಲಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಾವಿಗೆ ಸಂತಾಪ ಸೂಚಿಸಿದ್ದಾರೆ.

Similar News