×
Ad

ಮಹಿಳೆ ನಾಪತ್ತೆ

Update: 2023-06-13 20:46 IST

ಉಡುಪಿ, ಜೂ.13: ಬ್ರಹ್ಮಾವರ ತಾಲೂಕು ವಾರಂಬಳ್ಳಿ ಗ್ರಾಮದ ಎಸ್‌ಎಂಎಸ್ ಕಾಲೇಜು ಹಿಂಭಾಗದಲ್ಲಿ ವಾಸವಿದ್ದ ಚಂದ್ರಿಕಾ (30) ಎಂಬ ಮಹಿಳೆ ಜೂನ್ 4ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡು ತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಯವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Similar News