×
Ad

ಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಬಂಧನ

ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಕಣ್ಣೀರಿಟ್ಟ ಡಿಎಂಕೆ ನಾಯಕ

Update: 2023-06-14 10:12 IST

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮಿಳುನಾಡು ಸಚಿವ ಹಾಗೂ ಡಿಎಂಕೆ ನಾಯಕ ವಿ. ಸೆಂಥಿಲ್ ಬಾಲಾಜಿ  ಅವರನ್ನು ಬುಧವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (ಈಡಿ) ಬಂಧಿಸಿದೆ. ಬಾಲಾಜಿ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಅಳಲಾರಂಭಿಸಿದರು.

ವಿಚಾರಣೆಗಾಗಿ ಕರೆದೊಯ್ಯುವ ಮೊದಲು ಈಡಿ ಮಂಗಳವಾರ  ಬಾಲಾಜಿ ಅವರ ಮನೆಯ ಮೇಲೆ ದಾಳಿ ನಡೆಸಿತ್ತು. ಗಂಟೆಗಳ ವಿಚಾರಣೆ ಬಳಿಕ ಇಂದು ಬೆಳಗ್ಗೆ ಸಚಿವರನ್ನು ಬಂಧಿಸಲಾಯಿತು.

ಬಂಧನದ ನಂತರ ತನಿಖಾ ಸಂಸ್ಥೆ  ಬಾಲಾಜಿಯವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುತ್ತಿದ್ದಂತೆ, ಚೆನ್ನೈನ ಸರಕಾರಿ ಆಸ್ಪತ್ರೆಯಲ್ಲಿ ನಾಟಕೀಯ ದೃಶ್ಯಗಳು ಕಂಡುಬಂದವು.

ಆಸ್ಪತ್ರೆ ಹೊರಗೆ ಬಾಲಾಜಿ ಅವರ ಬೆಂಬಲಿಗರು ಜಾರಿ ನಿರ್ದೇಶನಾಲಯದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾಗ ಡಿಎಂಕೆ ನಾಯಕ ಆಂಬ್ಯುಲೆನ್ಸ್‌ನಲ್ಲಿ ಜೋರಾಗಿ ಅಳುತ್ತಿರುವುದು ಕಂಡುಬಂದಿದೆ.

ಅಳುತ್ತಲೇ ಇದ್ದ ಸಚಿವರನ್ನು ಆಂಬ್ಯುಲೆನ್ಸ್‌ನಿಂದ ಹೊರಗೆ ಕರೆದೊಯ್ಯಲಾಯಿತು.

Similar News