×
Ad

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ : 9 ಮಂದಿ ಮೃತ್ಯು

Update: 2023-06-14 12:15 IST

ಇಂಫಾಲ: ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದ 24 ಗಂಟೆಗಳಲ್ಲಿ ಮಹಿಳೆ ಸೇರಿದಂತೆ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.

ಸೇನೆಯ ಮೂಲಗಳ ಪ್ರಕಾರ ಖಮೆನ್ಲೋಕ್ ಪ್ರದೇಶದಲ್ಲಿ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಈ ಸಾವುಗಳು ಸಂಭವಿಸಿವೆ.

ಗಾಯಗೊಂಡ ಹಲವರನ್ನು ಚಿಕಿತ್ಸೆಗಾಗಿ ಇಂಫಾಲಕ್ಕೆ ರವಾನಿಸಲಾಗಿದೆ. ಹಿಂಸಾಚಾರದಲ್ಲಿ ಮೃತಪಟ್ಟವರಲ್ಲಿ ಕೆಲವರು ಅನೇಕ ಬುಲೆಟ್ ಗಾಯಗಳನ್ನು ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆಗಳಿಂದಾಗಿ ಈಗ ಒಂದು ತಿಂಗಳಿನಿಂದ ಉದ್ವಿಗ್ನತೆಯನ್ನು ಹೊಂದಿರುವ ರಾಜ್ಯದಲ್ಲಿ ಶಾಂತಿಯನ್ನು ಪುನಃಸ್ಥಾಪಿಸುವ ಪ್ರಯತ್ನಗಳ ಮಧ್ಯೆ ಈ ಘಟನೆಯು ದೊಡ್ಡ ಹಿನ್ನಡೆಯಾಗಿದೆ. ನಿನ್ನೆ ರಾತ್ರಿಯ ಘಟನೆಯ ನಂತರ ಕರ್ಫ್ಯೂ ಸಡಿಲಿಕೆಯನ್ನು ನಿರ್ಬಂಧಿಸಲಾಗಿದೆ.

ಘಟನೆ ಸಂಭವಿಸಿದ ಖಮೆನ್ಲೋಕ್  ಪ್ರದೇಶವು  ಕಾಂಗ್ಪೊಕ್ಪಿ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳ ಗಡಿಯ ಸಮೀಪದಲ್ಲಿದೆ. ಕಳೆದೆರಡು ದಿನಗಳಿಂದ ಈ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

Similar News