ಬಿಟ್ ಕಾಯಿನ್ ಹಗರಣದ ಮರು ತನಿಖೆಗೆ ನಿರ್ಧಾರ: ಗೃಹ ಸಚಿವ ಡಾ. ಜಿ ಪರಮೇಶ್ವರ್
Update: 2023-06-14 16:34 IST
ಬೆಂಗಳೂರು: 'ಬಿಟ್ ಕಾಯಿನ್ ಹಗರಣದ ಮರು ತನಿಖೆಗೆ ನಿರ್ಧಾರ ಮಾಡಲಾಗಿದೆ' ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಬಿಟ್ ಕಾಯಿನ್ ಪ್ರಕರಣವನ್ನು ಮರು ಪರಿಶೀಲನೆ ಮಾಡುತ್ತೇವೆ. ನಮ್ಮ ಸರ್ಕಾರ ಬಂದು 20 ದಿನ ಆಗಿದೆ ಅಷ್ಟೇ. ಬಿಜೆಪಿಯವರು ಈಗಲೇ ಕುಣಿದಾಡ್ತಿದ್ದಾರೆ. ಅವರು ಸ್ವಲ್ಪ ಸಮಾಧಾನವಾಗಿರುವುದು ಒಳ್ಳೆಯದು ಎಂದರು.
''ಸುರ್ಜೆವಾಲಾ ಇದ್ದ ಸಭೆ ಸರಕಾರದ ಅಧಿಕೃತ ಸಭೆಯಲ್ಲ''
'ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಅಧಿಕಾರಿಗಳ ಜೊತೆ ನಡೆಸಿದ ಸಭೆ ಅದು ಅಧಿಕೃತ ಸಭೆ ಆಗಿರಲಿಲ್ಲ. ಡಿಸಿಎಂ ಡಿ ಕೆ ಶಿವಕುಮಾರ್ ಸಭೆ ನಡೆಸಿದ್ದರು. ಆ ವೇಳೆ ರಣದೀಪ್ ಸಿಂಗ್ ಸುರ್ಜೇವಾಲ ಬಂದಿದ್ದಾರೆ ಅಷ್ಟೇ' ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.