ವಿಶ್ವ ರಕ್ತದಾನಿಗಳ ದಿನಕ್ಕೆ ಜಲವರ್ಣ ಕೃತಿ ರಚನೆ
Update: 2023-06-14 19:45 IST
ಉಡುಪಿ, ಜೂ.14: ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಮಣಿಪಾಲ ಕೆಎಂಸಿಯ ಸಮುದಾಯ ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಮಣಿಪಾಲದ ಕಲಾವಿದರಾದ ಶ್ರೀನಾಥ್ ಮಣಿಪಾಲ್ ಮತ್ತು ರವಿ ಹಿರೆಬೆಟ್ಟು ರಕ್ತದಾನದ ಮಹತ್ವ ವಿವರಿಸುವ ಹಾಗೂ ಜಾಗೃತಿ ಮೂಡಿಸುವ ಬೃಹತ್ ಜಲವರ್ಣ ಕಲಾಕೃತಿಯನ್ನು ಕೆಎಂಸಿ ಆವರಣದಲ್ಲಿ ರಚಿಸಿದರು.
ಈ ಸಂದರ್ಭದಲ್ಲಿ ಕಸ್ತೂರ್‌ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ಕೆಎಂಸಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥೆ ಡಾ. ಶಮ್ಮಿ ಶಾಸ್ತ್ರಿ, ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಅಶ್ವಿನಿ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.