×
Ad

ಕಾರ್ಕಳ: ಲೋಕಾಯುಕ್ತದಿಂದ ಸಾರ್ವಜನಿಕ ಅಹವಾಲು ಸ್ವೀಕಾರ

Update: 2023-06-14 19:54 IST

ಉಡುಪಿ, ಜೂ.14:ಉಡುಪಿ ಲೋಕಾಯುಕ್ತ ಪೊಲೀಸ್ ವಿಭಾಗದ ವತಿಯಿಂದ ಕಾರ್ಕಳ ತಾಲೂಕು ಕಚೇರಿಯಲ್ಲಿ ಇಂದು ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ಉಡುಪಿ ವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ಕೆ.ಸಿ, ಪೊಲೀಸ್ ನಿರೀಕ್ಷಕರಾದ ಜಯರಾಮ ಡಿ.ಗೌಡ ಹಾಗೂ ರಫೀಕ್ ಎಂ. ಕಾರ್ಕಳ ತಾಲೂಕು ತಹಶೀಲ್ದಾರ್ ಬಿ.ಅನಂತಶಂಕರ್, ಕಾರ್ಕಳದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಶ್ರೀನಿವಾಸ ಕಾರ್ಕಳ, ಕಾರ್ಕಳದ ಸಹಾಯಕ ಕೃಷಿ ನಿರ್ದೇಶಕ ಸತೀಶ್ ಬಿ., ವಾಣಿಜ್ಯ ತೆರಿಗೆಯ ಸಹಾಯಕ ಆಯುಕ್ತ ರಾಜಾರಾಮ ಹೆಚ್.ಎ, ತಾಲೂಕು ಪಂಚಾಯತ್ ವ್ಯವಸ್ಥಾಪಕ ಹರೀಶ್ ಕೆ.ಬಿ, ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ, ಪಶುಪಾಲನಾ ಇಲಾಖೆಯ ಡಾ.ಕೆ.ಬಿ ಸುನೀಲ್, ನಿಟ್ಟೆ ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ನಾಯಕ ಕೆ.ಕಾಮತ್, ಕಾರ್ಕಳ ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಸದಾನಂದ ನಾಯ್ಕ ಹಾಗೂ ವಿವಿಧ ಇಲಾಖೆಗಳ  ಅಧಿಕಾರಿಗಳು ಉಪಸ್ಥಿತರಿದ್ದರು. 

ಅಹವಾಲು ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾದ ಒಟ್ಟು 7 ಅಹವಾಲುಗಳನ್ನು ಸ್ಥಳದಲ್ಲಿ ಇತ್ಯರ್ಥ ಪಡಿಸಲಾಯಿತು.

Similar News