ನಾಳೆ (ಜೂ.15) ಸಿಇಟಿ ಫಲಿತಾಂಶ ಪ್ರಕಟ
ಬೆಂಗಳೂರು, ಜೂ.14: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ-2023ರ(ಸಿಇಟಿ) ಫಲಿತಾಂಶವನ್ನು ನಾಳೆ (ಜೂ.15) ಬೆಳಗ್ಗೆ 9.30ಕ್ಕೆ ಪ್ರಕಟಿಸಲಾಗುವುದು ಕೆಇಎ ತಿಳಿಸಿದೆ.
ಸಿಇಟಿ ಫಲಿತಾಂಶ ಬಿಡುಗಡೆಯಾದ ನಂತರ ಅಭ್ಯರ್ಥಿಗಳು ಅಧಿಕೃತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‍ಸೈಟ್ http://kea.kar.nic.in ಗೆ ಭೇಟಿ ನೀಡಿ ಫಲಿತಾಂಶವನ್ನು ಪರಿಶೀಲನೆ ಮಾಡಬಹುದಾಗಿದೆ ಎಂದು ಕೆಇಎ ತಿಳಿಸಿದೆ.
ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಇಂಜಿನಿಯರಿಂಗ್, ಆಯುರ್ವೇದ, ಹೋಮಿಯೋಪತಿ ಮತ್ತು ಫಾರ್ಮಸಿ, ಬಿಎಸ್‍ಸಿ ನಸಿರ್ಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ಸಿಇಟಿಯನ್ನು ನಡೆಸಲಾಗುತ್ತದೆ.
ಈ ವರ್ಷ ಒಟ್ಟು 2.6 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಯನ್ನು ಬರೆದಿದ್ದರು. ರಾಜ್ಯಾದ್ಯಂತ 592 ಪರೀಕ್ಷಾ ಕೇಂದ್ರಗಳಲ್ಲಿ ಮೇ 20 ರಿಂದ ಮೇ 22ರವರೆಗೆ ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 16,000 ಕನ್ನಡೇತರ ವಿದ್ಯಾರ್ಥಿಗಳು ಈ ಪರೀಕ್ಷೆ ತೆಗೆದುಕೊಂಡಿದ್ದಾರೆ. ಮೇ 26 ರಂದು ಕೆಇಎ ತಾತ್ಕಾಲಿಕ ಉತ್ತರ ಕೀಯನ್ನು ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳಿಗೆ ಆಕ್ಷೇಪಣೆ ಸಲ್ಲಿಸಲು ಮೇ 30ರ ವರೆಗೆ ಕಾಲಾವಕಾಶ ನೀಡಲಾಗಿತ್ತು.