×
Ad

ಪಕ್ಷ ವಿರೋಧಿ ಚಟುವಟಿಕೆ: ಕಾಂಗ್ರೆಸ್‌ನಿಂದ ಬಿಲಾಲ್ ಮೊಯಿದ್ದೀನ್ ಉಚ್ಛಾಟನೆ

Update: 2023-06-14 22:04 IST

ಮಂಗಳೂರು, ಜೂ.14: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ನ ಕಾರ್ಯದರ್ಶಿಯಾಗಿದ್ದ ಬಿಲಾಲ್ ಮೊಯಿದ್ದೀನ್  ಅವರನ್ನು ಪಕ್ಷ ವಿರೋಧ ಚಟುವಟಿಕೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಶಿಸ್ತು ಸಮಿತಿ ತಕ್ಷಣಕ್ಕೆ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿದೆ.

ಬಿಲಾಲ್ ಮೊಯಿದ್ದೀನ್‌ ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್  ಪಕ್ಷದ ಅಭ್ಯರ್ಥಿ ಜೆ. ಆರ್. ಲೋಬೊ ವಿರುದ್ಧ ಪ್ರಚಾರ ಮಾಡಿದ್ದು, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವುದು ಸಾಬೀತಾಗಿರುವುದರಿಂದ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಶಿಸ್ತು ಸಮಿತಿ  ಉಚ್ಚಾಟನೆ ಮಾಡಲಾಗಿದೆ ಎಂದು ಶಿಸ್ತು ಸಮಿತಿಯ ಅಧ್ಯಕ್ಷ ಬಿ.ಇಬ್ರಾಹೀಂ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Similar News