×
Ad

ಶಿವಮೊಗ್ಗ: ಯುವಕನ ಕೊಲೆ

Update: 2023-06-14 23:52 IST

ಶಿವಮೊಗ್ಗ: ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಯುವಕನೋರ್ವನ ಕೊಲೆ ಮಾಡಿರುವ ಘಟನೆ ಇಲಿಯಾಸ್ ನಗರದ ನೂರು ಅಡಿ ರಸ್ತೆ ಬಳಿ ಬುಧವಾರ ವರದಿಯಾಗಿದೆ.

ಆಸೀಫ್(25) ಹತ್ಯೆಯಾದ ಯುವಕನಾಗಿದ್ದು, ಜಬಿ ಎಂಬಾತ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

ಈ ಕುರಿತು ಮಾಹಿತಿ ನೀಡಿರುವ ಎಸ್ಪಿ ಮಿಥುನ್‌ ಕುಮಾರ್, ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಈ ಕೃತ್ಯ ಎಸಗಲಾಗಿದೆ. ಅಲ್ಲದೆ ಆರೋಪಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.  

ಪ್ರಕರಣ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News