×
Ad

ಲೈಂಗಿಕ ದೌರ್ಜನ್ಯ ಆರೋಪ: ಮುರುಘಾ ಶ್ರೀಗಳ ವಿರುದ್ಧದ ಸಾಕ್ಷಿಗಳ ವಿಚಾರಣೆಗೆ ಹೈಕೋರ್ಟ್ ತಡೆ

Update: 2023-06-15 18:57 IST

ಬೆಂಗಳೂರು, ಜೂ. 15: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಮುರುಘಾ ಮಠದ ಮುರುಘಾ ಶ್ರೀ ವಿರುದ್ಧ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಡೆಸುತ್ತಿರುವ ಸಾಕ್ಷಿಗಳ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ. 

ಪ್ರಕರಣದಲ್ಲಿ ಆರೋಪಿಯಾಗಿರುವ ಮುರುಘಾ ಶ್ರೀ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಜು.1ರ ವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. 

ಮುರುಘಾ ಮಠದ ಹಾಸ್ಟೆಲ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಮೈಸೂರಿನ ನಜರ್‍ಬಾದ್ ಪೊಲೀಸ್ ಠಾಣೆಯಲ್ಲಿ 2022ರ ಆ.26ರಂದು ದೂರು ದಾಖಲಾಗಿತ್ತು. 

ಅವರನ್ನು ಪೊಲೀಸರು 2022ರ ಸೆ.1ರಂದು ಚಿತ್ರದುರ್ಗದ ಮುರುಘಾ ಮಠದಲ್ಲಿಯೇ ಬಂಧಿಸಿದ್ದರು. ಶರಣರು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅಲ್ಲದೆ, ಸೆಷನ್ಸ್ ನ್ಯಾಯಾಲಯವು ಶರಣರ ವಿರುದ್ಧದ ಸಾಕ್ಷಿಗಳ ವಿಚಾರಣೆಗೆ ಆದೇಶಿಸಿದೆ. ಈ ಕ್ರಮವನ್ನು ಹೈಕೋರ್ಟ್‍ನಲ್ಲಿ ಪ್ರಶ್ನಿಸಲಾಗಿದೆ.

Similar News