×
Ad

ಉಡುಪಿ: ಕೋಟ್ಪಾ ದಳದಿಂದ ದಾಳಿ, ದಂಡ ವಸೂಲಿ

Update: 2023-06-15 20:38 IST

ಉಡುಪಿ, ಜೂ.15: ಉಡುಪಿ ತಾಲೂಕಿನಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಇಂದು ನಗರ ವ್ಯಾಪ್ತಿಯ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್ ಹಾಗೂ ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ ಒಟ್ಟು 16 ಪ್ರಕರಣಗಳನ್ನು ದಾಖಲಿಸಿ, 2,400 ರೂ. ದಂಡ ವಸೂಲಿ ಮಾಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಶಶಿಕಲಾ, ಎನ್‌ಟಿಸಿಪಿ ವಿಭಾಗದ ಜಿಲ್ಲಾ ಸಂಯೋಜಕಿ ಮಂಜುಳಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Similar News