×
Ad

ಪ್ರತ್ಯೇಕ ಪ್ರಕರಣ: ಇಬ್ಬರು ಆತ್ಮಹತ್ಯೆ

Update: 2023-06-15 21:12 IST

ಬ್ರಹ್ಮಾವರ: ಅನಾರೋಗ್ಯದಿಂದ ಬಳಲುತ್ತಿದ್ದ ಉಪ್ಪಿನಕೋಟೆ ಕಿಣಿಯರಬೆಟ್ಟು ನಿವಾಸಿ ಸುಧಾಕರ ಪೂಜಾರಿ(46) ಎಂಬವರು ಮಾನಸಿಕವಾಗಿ ನೊಂದು, ಜೀವನದಲ್ಲಿ ಜೀಗುಪ್ಸೆಗೊಂಡು ಜೂ.15ರಂದು ಬೆಳಗ್ಗೆ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಹೊಟ್ಟೆನೋವಿನಿಂದ ಬಳಲುತ್ತಿದ್ದ ಕಾರ್ಕಳ ಪುಲ್ಕೇರಿ ಬೈಪಾಸ್‌ನ ಮುಸ್ತಾಕ್(40) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜೂ.14ರಂದು ರಾತ್ರಿ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ  ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News