ಬಂದರು ಮತ್ತು ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಮಂಗಳೂರಿಗೆ ಭೇಟಿ
ಮಂಗಳೂರು: ಬಂದರು ಮತ್ತು ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸಿದ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದರು.
ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಗೆದ್ದ ಕಾಂಗ್ರೆಸ್ ಶಾಸಕರ, ಎಲ್ಲಾ ಹಿರಿಯ ನಾಯಕರ ಹಾಗೂ ಪರಾಜಿತ ಅಭ್ಯರ್ಥಿಗಳ ವಿಶ್ವಾಸವನ್ನು ಪಡೆದು ಕೆಲಸ ಮಾಡುತ್ತೇನೆ. ಮೀನುಗಾರರ ಸಮಸ್ಯೆ ಪರಿಹರಿಸಲು ಸಿದ್ಧನಿದ್ದು, ಇದಕ್ಕಾಗಿ ಪ್ರತಿ ತಿಂಗಳು ಜಿಲ್ಲೆಗೆ ಭೇಟಿ ನೀಡುತ್ತಿರುತ್ತೇನೆ. ಪಕ್ಷ ನನಗೆ ಉತ್ತರ ಕನ್ನಡ, ಉಡುಪಿ ಹಾಗೂ ದ.ಕ.ಜಿಲ್ಲೆಯ ಜವಾಬ್ದಾರಿ ನೀಡಿ ಸಚಿವಸ್ಥಾನ ನೀಡಿದೆ. ಇದನ್ನು ನಿಷ್ಠೆಯಿಂದ ನಿಭಾಯಿಸುತ್ತೇನೆ. ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳನ್ನು ಪ್ರತೀ ಬೂತ್ ಮಟ್ಟಕ್ಕೆ ತಲುಪಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ಮಮತಾ ಗಟ್ಟಿ, ಮುಖಂಡರಾದ ಭಾಸ್ಕರ್.ಕೆ, ಜೋಕ್ಕಿಂ ಡಿಸೋಜಾ, ವಿಶ್ವಾಸ್ ದಾಸ್, ಬಿ.ಎಂ.ಅಬ್ಬಾಸ್ ಅಲಿ, ಲಾರೆನ್ಸ್ ಡಿಸೋಜಾ, ಚೇತನ್ ಬೆಂಗ್ರೆ, ಸುದರ್ಶನ್ ಜೈನ್, ನೀರಜ್ ಚಂದ್ರಪಾಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೆಲೇರಿಯನ್ ಸಿಕ್ವೇರಾ, ಮೋಹನ್ ಕೋಟ್ಯಾನ್, ಪ್ರಕಾಶ್ ಸಾಲ್ಯಾನ್, ಬೇಬಿ ಕುಂದರ್ ಹಾಗೂ ಜಿಲ್ಲಾ ಮಹಿಳಾ ಮತ್ತು ಯುವ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.