ಪುತ್ತೂರು ತಾಲೂಕು ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕಟ
ಪುತ್ತೂರು: ತಾಲೂಕಿನ 22 ಗ್ರಾಮ ಪಂಚಾಯತ್‍ಗಳಿಗೆ 2ನೇ ಅವಧಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳ ಮೀಸಲಾತಿ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಲಾಯಿತು.
ಪುತ್ತೂರಿನ ಪುರಭವನದಲ್ಲಿ ದ.ಕ.ಜಿಲ್ಲಾಧಿಕಾರಿ ನೇತೃತ್ವದಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿಯ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
ದ.ಕ.ಜಿಲ್ಲಾ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಗಿರೀಶ್ ನಂದನ್, ಪುತ್ತೂರು ತಹಸೀಲ್ದಾರ್ ಶಿವಶಂಕರ್, ಪುತ್ತೂರು ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಉಪಸ್ಥಿತರಿದ್ದು ಆಯ್ಕೆ ಪ್ರಕ್ರಿಯೆಗೆ ಸಹಕರಿಸಿದರು.
ಗ್ರಾಪಂ ಮೀಸಲಾತಿ ಪಟ್ಟಿ
1. ಕಬಕ ಗ್ರಾಪಂ ಅಧ್ಯಕ್ಷ-ಪ.ಜಾತಿ ಮಹಿಳೆ, ಉಪಾಧ್ಯಕ್ಷ ಹಿಂದುಳಿದ ವರ್ಗ ಬಿ ಮಹಿಳೆ,
2. ಕೊಡಿಪ್ಪಾಡಿ ಗ್ರಾಪಂ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಪ.ಜಾತಿ,
3. ಬನ್ನೂರು ಗ್ರಾಪಂ ಅಧ್ಯಕ್ಷ ಪ.ಪಂಗಡ ಮಹಿಳೆ, ಉಪಾಧ್ಯಕ್ಷ ಹಿಂದುಳಿದ ವರ್ಗ ಎ
4. ಕೋಡಿಂಬಾಡಿ ಗ್ರಾಪಂ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಹಿಂದುಳಿದ ವರ್ಗ ಎ
5. 34ನೇ ನೆಕ್ಕಿಲಾಡಿ ಗ್ರಾಪಂ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ
6. ಉಪ್ಪಿನಂಗಡಿ ಗ್ರಾಪಂ ಅಧ್ಯಕ್ಷ ಪ.ಜಾತಿ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ
7. ಬಜತ್ತೂರು ಗ್ರಾಪಂ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಹಿಂದುಳಿದ ವರ್ಗ ಎ ಮಹಿಳೆ
8. ಹಿರೇಬಂಡಾಡಿ ಗ್ರಾಪಂ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ
9. ನರಿಮೊಗರು ಗ್ರಾಪಂ ಅಧ್ಯಕ್ಷ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ
10. ಬಲ್ನಾಡು ಗ್ರಾಪಂ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ
11. ಆರ್ಯಾಪು ಗ್ರಾಪಂ ಅಧ್ಯಕ್ಷ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಪ.ಪಂಗಡ
12. ಮುಂಡೂರು ಗ್ರಾಪಂ ಅಧ್ಯಕ್ಷ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಪ.ಜಾತಿ ಮಹಿಳೆ
13. ಕೊಳ್ತಿಗೆ ಗ್ರಾಪಂ ಅಧ್ಯಕ್ಷ ಪ.ಜಾತಿ ಮಹಿಳೆ, ಉಪಾಧ್ಯಕ್ಷ ಹಿಂದುಳಿದ ವರ್ಗ ಎ
14. ಕೆದಂಬಾಡಿ ಗ್ರಾಪಂ ಅಧ್ಯಕ್ಷ ಪ.ಪಂಗಡ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ
15. ಕೆಯ್ಯೂರು ಗ್ರಾಪಂ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಹಿಂದುಳಿದ ವರ್ಗ ಎ ಮಹಿಳೆ
16. ಒಳಮೊಗ್ರು ಗ್ರಾಪಂ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ
17. ಬೆಟ್ಟಂಪಾಡಿ ಗ್ರಾಪಂ ಅಧ್ಯಕ್ಷ ಹಿಂದುಳಿದ ವರ್ಗ ಬಿ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ
18. ಪಾಣಾಜೆ ಗ್ರಾಪಂ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ
19. ನಿಡ್ಪಳ್ಳಿ ಗ್ರಾಪಂ ಅಧ್ಯಕ್ಷ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಪ. ಜಾತಿ ಮಹಿಳೆ
20. ಅರಿಯಡ್ಕ ಗ್ರಾಪಂ ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಪ.ಜಾತಿ ಮಹಿಳೆ
21. ಬಡಗನ್ನೂರು ಗ್ರಾಪಂ ಅಧ್ಯಕ್ಷ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ
22. ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ