×
Ad

ಕಟಪಾಡಿ ಕೇಶವ ಭಂಡಾರಿ ನಿಧನ

Update: 2023-06-16 20:02 IST

ಉಡುಪಿ, ಜೂ.16: ಉಡುಪಿ ತಾಲೂಕು ಸವಿತಾ ಸಮಾಜದ ಮಾಜಿ ಅಧ್ಯಕ್ಷ, ಸವಿತಾ ಸಮಾಜ ವಿವಿದೋದ್ದೇಶ ಸೌಹಾರ್ದ ಸಹಕಾರಿಯ ಸ್ಥಾಪಕ ನಿರ್ದೇಶಕ, ಪ್ರಸ್ತುತ ಜಿಲ್ಲಾ ಸವಿತಾ ಸಮಾಜದ ಗೌರವ ಸಲಹೆಗಾರ ಕಟಪಾಡಿ ಕೇಶವ ಭಂಡಾರಿ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಜಿಪಂ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಉಡುಪಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ವಿಶ್ವನಾಥ್ ಭಂಡಾರಿ ನಿಂಜೂರು, ಕಾರ್ಯದರ್ಶಿ ಸದಾಶಿವ ಬಂಗೇರ ಕುರ್ಕಾಲು, ಗೌರವಾಧ್ಯಕ್ಷ ಬನ್ನಂಜೆ ಗೋವಿಂದ ಭಂಡಾರಿ, ಕೋಶಾಧಿಕಾರಿ ಶೇಖರ್ ಸಾಲಿಯಾನ್, ಸಂಚಾಲಕ ಸತೀಶ್ ಭಂಡಾರಿ ಕಾಪು, ಸವಿತಾ ಸೌಹಾರ್ದ ಸಹಕಾರಿ ಅಧ್ಯಕ್ಷ ನವೀನ್‌ಚಂದ್ರ ಭಂಡಾರಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಾಲತಿ ಅಶೋಕ್, ಜಿಲ್ಲಾ ಪರಿಯಾಳ ಸಮಾಜದ ಅಧ್ಯಕ್ಷ ಶಂಕರ್ ಸಾಲಿಯಾನ್, ಕಚ್ಚೂರು ಶ್ರೀನಾಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಸುಭಾಸ್ ಭಂಡಾರಿ, ಪೂಜಾ ಸಮಿತಿ ಸಂಚಾಲಕ ಅಶೋಕ್ ಭಂಡಾರಿ ಕುತ್ಪಾಡಿ, ಉಡುಪಿ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ರಾಜು ಭಂಡಾರಿ ಕಿನ್ನಿಮುಲ್ಕಿ ಸಂತಾಪ ಸಲ್ಲಿಸಿದ್ದಾರೆ.

Similar News