×
Ad

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಕಾರ್ಕಳದ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರು ಪಾಲು

Update: 2023-06-18 16:00 IST

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಕಾರ್ಕಳದ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನಾಪತ್ತೆಯಾಗಿದ್ದಾರೆ. ಈ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.

ತೀರ್ಥಹಳ್ಳಿ ತಾಲೂಕು ತೀರ್ಥ ಮತ್ತೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ ರವಿವಾರ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್‌ (38) ಮತ್ತು ಬಾಲಾಜಿ (36) ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ವೇಳೆ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

ಉಪನ್ಯಾಸಕರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದರು. ತೀರ್ಥಹಳ್ಳಿಯ ತೀರ್ಥಮತ್ತೂರು ಮಠದ ಸಮೀಪ ಇರುವ ಹೋಂ ಸ್ಟೇಯಲ್ಲಿ ತಂಗಿದ್ದರು. ತೀರ್ಥಹಳ್ಳಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

Similar News