×
Ad

ಉರ್ವಸ್ಟೋರ್‌ನಲ್ಲಿ ಇಂದಿರಾ ಸೇವಾ ಕೇಂದ್ರ ಪ್ರಾರಂಭ

Update: 2023-06-18 18:55 IST

ಮಂಗಳೂರು: 25ನೇ ದೇರೆಬೈಲ್ ಪಶ್ಚಿಮ ವಾಡ್ 9 ಕಾಂಗ್ರೆಸ್ ಸಮಿತಿ ಇದರ ವತಿಯಿಂದ ಉರ್ವಸ್ಟೋರ್  ಜಂಕ್ಷನ್‌ನಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಗ್ರಹ ಜ್ಯೋತಿ, ಗ್ರಹಲಕ್ಷ್ಮೀ, ಶಕ್ತಿ ಯೋಜನೆಗಳ ಆನ್‌ಲೈನ್ ಅರ್ಜಿ ಸಲ್ಲಿಸುವ ಇಂದಿರಾ ಸೇವಾ ಕೇಂದ್ರವನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ನ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಜೂ.18ರಂದು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರ ಬಂದು ಒಂದು ತಿಂಗಳ ಒಳಗೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಹೊರಟಿದೆ. ಈಗಾಗಲೇ ಶಕ್ತಿ ಯೋಜನೆ ಪ್ರಾರಂಭವಾಗಿದೆ. ರಾಜ್ಯದ ಮಹಿಳೆಯವರು ಸರಕಾರಿ ಬಸ್‌ನಲ್ಲಿ ಉಚಿತ ಪ್ರಯಾಣದ ವ್ಯವಸ್ಥೆಯನ್ನು ಉಪಯೋ ಗಿಸುತ್ತಿದ್ದಾರೆ. ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸ್ವೀಕಾರ ಇಂದಿನಿಂದ ಆರಂಭವಾಗಿದೆ. ಈ ಎಲ್ಲಾ ಯೋಜನೆ ಗಳನ್ನು ಜನರಿಗೆ ಮುಟ್ಟಿಸಲು ಇಂದಿರಾ ಸೇವಾ ಕೇಂದ್ರ ಬಹಳಷ್ಟು ಪ್ರಯೋಜನಕಾರಿಯಾಗಲಿದೆ. ಕಾಂಗ್ರೆಸ್  ಪಕ್ಷದ ಎಲ್ಲಾ ಕಾರ್ಯಕರ್ತರು ಇದಕ್ಕೆ ಕೈಜೋಡಿಸಬೇಕು ಎಂದು ಕರೆ ಇತ್ತರು.

ಈ ಸಂದರ್ಭ ಮಾಜಿ ಶಾಸಕರಾದ ಜೆ.ಆರ್.ಲೋಬೊ, ಮಾಜಿ ಎಂಎಲ್‌ಸಿ ಐವನ್ ಡಿಸೋಜಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಜಿಲ್ಲಾ ಒಬಿಸಿ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್ ಕುಮಾರ್ ಶೆಟ್ಟಿ, ಟಿ.ಕೆ.ಸುಧೀರ್, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜಾ, ಮಾಜಿ ಮೂಡ ಅಧ್ಯಕ್ಷ ಡಾ.ಬಿ.ಜಿ. ಸುವರ್ಣ, ಮನಪಾ ಸದಸ್ಯ ಅನಿಲ್ ಕುಮಾರ್ ಪೂಜಾರಿ, ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲಾ ಗಟ್ಟಿ, ದಕ್ಷಿಣ ಬ್ಲಾಕ್ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಚಂದ್ರಕಲಾ ಜೋಗಿ, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗೀತಾ ಅತ್ತಾವರ್, ಮಂಜುಳಾ ನಾಯಕ್, ಮಾಜಿ ಕಾರ್ಪೊರೇಟರ್ ನಾಗವೇಣಿ, ನಗರ ಬ್ಲಾಕ್‌ನ ಪ್ರಧಾನ ಕಾರ್ಯದರ್ಶಿ ಚೇತನ್ ಕುಮಾರ್, ರೂಪ ಚೇತನ್, ಸಮರ್ಥ್ ಭಟ್, ಲಿಯಾಕತ್ ಶಾ, ತನ್ವೀರ್ ಶಾ, ಮಾಜಿ ಮಾನಪಾ ಸದಸ್ಯ ಪದ್ಮನಾಭ ಅಮೀನ್, ಯುವ ಕಾಂಗ್ರೆಸ್‌ನ ವೆಲ್ವಿನ್ ಹಾಗೂ 25ನೇ ದೇರೆಬೈಲ್ ಪಶ್ಚಿಮ ವಾರ್ಡಿನ ಕಾಂಗ್ರೆಸ್ ಸದಸ್ಯರು ಉಪಸ್ಥಿತರಿದ್ದರು.

Similar News