×
Ad

'ಗ್ಯಾರಂಟಿ' ಸರಕಾರ ಹೆಚ್ಚು ದಿನ ಉಳಿಯುವುದಿಲ್ಲ: ಬಿ.ಎಸ್. ಯಡಿಯೂರಪ್ಪ

Update: 2023-06-18 23:11 IST

ಶಿವಮೊಗ್ಗ: ಗ್ಯಾರಂಟಿ ಹೆಸರಿನ ಕಾಂಗ್ರೆಸ್ ನ ಸುಳ್ಳು ಆಶ್ವಾಸನೆಗಳ ನಂಬಿದ ಜನರು ಮೋಸ ಹೋಗಿದ್ದಾರೆ. ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಇಲ್ಲಿನ ಪಿಇಎಸ್ ಪ್ರೇರಣಾ ಸಭಾಂಗಣದಲ್ಲಿ ರವಿವಾರ ಕೇಂದ್ರದ ಬಿಜೆಪಿ ಸರ್ಕಾರ 9 ವರ್ಷ ಪೂರೈಸಿದ ಹಿನ್ನಲೆ ಆಯೋಜಿಸಿದ್ದ ಜನ ಸಭೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದೂ, ಮುಸ್ಲಿಂ, ಕ್ರೈಸ್ತರ ನಡುವೆ ವಿಷಬೀಜ ಬಿತ್ತಿ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ನನಗೆ ಸಂಪೂರ್ಣ ವಿಶ್ವಾಸವಿದೆ ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ಭರವಸೆಗಳು ತಾತ್ಕಾಲಿಕ. ಆ ಭರವಸೆಗಳು ಈಡೇರುತ್ತವೆ ಎಂಬ ವಿಶ್ವಾಸ ಯಾರಿಗೂ ಇಲ್ಲ. ಅದನ್ನು ಜನರಿಗೆ ಮನವರಿಕೆ ಮಾಡುವ ಅವಶ್ಯಕತೆ ಇದೆ. ಸರ್ಕಾರದ ವೈಫಲ್ಯವನ್ನು ಜನರ ಮುಂದಿಟ್ಟು ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಎಲ್ಲರೂ ಸೇರಿ ಶ್ರಮಿಸೋಣ ಎಂದರು.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆ ಆಗುತ್ತದೆ ಎಂಬ ನಿರೀಕ್ಷೆ ನಮಗೆ ಇರಲಿಲ್ಲ. ಗ್ಯಾರಂಟಿ ಹೆಸರಿನ ಕಾಂಗ್ರೆಸ್ ನ ಸುಳ್ಳು ಆಶ್ವಾಸನೆಗಳ ನಂಬಿದ ಜನರು ಮೋಸ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಸತ್ಯ ಸಂಗತಿ ಜನರಿಗೆ ಮನವರಿಕೆ ಆಗಲಿದೆ ಎಂದರು.

ಭಾಗ್ಯ ಲಕ್ಷ್ಮೀ ಯೋಜನೆ, ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್, ಶಾಲಾ ಮಕ್ಕಳಿಗೆ ಸೈಕಲ್, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ, ಹೀಗೆ ಹತ್ತು ಹಲವು ಯೋಜನೆಗಳನ್ನು ಬಿಜೆಪಿ ಆಡಳಿತದ ಅವಧಿಯಲ್ಲಿ ಜಾರಿಗೆ ತಂದಿದ್ದೆವು. ಅದು ನಮ್ಮ ಸಾಧನೆ ಎಂದರು. 

Similar News