ಇಂದು PUC ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ
Update: 2023-06-20 00:13 IST
ಬೆಂಗಳೂರು, ಜೂ.19: ಮೇ-ಜೂನ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು(ಜೂ.20) https://karresults.nic.in/ ನಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ತಿಳಿಸಿದೆ.
ಮೇ 25ರಿಂದ ಜೂ.3ರವರೆಗೆ ಪರೀಕ್ಷೆಗಳು ನಡೆದಿದ್ದವು. ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಫಲಿತಾಂಶವನ್ನು ವೆಬ್‍ಸೈಟ್‍ನಲ್ಲಿ ಬೆಳಗ್ಗೆ 11 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.