ನಾಯಕರೇ ಇಲ್ಲದ ಬಿಜೆಪಿಗೆ ವಿರೋಧ ಪಕ್ಷದ ನಾಯಕ ಸಿಗುವುದಾದರೂ ಎಲ್ಲಿಂದ?: ಕಾಂಗ್ರೆಸ್
ಬೆಂಗಳೂರು: 'ನಾಯಕರೇ ಇಲ್ಲದ ಬಿಜೆಪಿ ಗೆ ವಿರೋಧ ಪಕ್ಷದ ನಾಯಕ ಸಿಗುವುದಾದರೂ ಎಲ್ಲಿಂದ?' ಎಂದು ಕಾಂಗ್ರೆಸ್ ಟೀಕಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ''ಬಿಜೆಪಿಯಲ್ಲಿ ಸೋತು ಸುಣ್ಣವಾದವರು, ರಿಟೈರ್ಮೆಂಟ್ ತೆಗೆದುಕೊಂಡವರು, ಮನೆಯಲ್ಲಿ ಕುಂತವರು, ಕೆಲಸಕ್ಕೆ ಬಾರದವರೇ ನಮ್ಮ ಸರ್ಕಾರದ ಬಗ್ಗೆ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾರೆ. ಒಬ್ಬನೇ ಒಬ್ಬ ವ್ಯಕ್ತಿ ವಿರೋಧ ಪಕ್ಷದ ನಾಯಕ ಸಿಗಲಿಲ್ಲವೇ ಬಿಜೆಪಿಯಲ್ಲಿ?'' ಎಂದು ಪ್ರಶ್ನೆ ಮಾಡಿದೆ.
''ಬಿಜೆಪಿಯವರು ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಿ. ನಮ್ಮ ಮೇಲೆ ನಂಬಿಕೆ ಇಟ್ಟು ಜನ ನಮಗೆ ಐದು ವರ್ಷಗಳ ಕಾಲ ಅಧಿಕಾರ ನೀಡಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವುದು ನಮ್ಮ ಗುರಿ'' ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೋಮವಾರ ಹೇಳಿಕೆ ನೀಡಿದ್ದಾರೆ.
ಬಿಜೆಪಿಯಲ್ಲಿ
— Karnataka Congress (@INCKarnataka) June 19, 2023
ಸೋತು ಸುಣ್ಣವಾದವರು,
ರಿಟೈರ್ಮೆಂಟ್ ತೆಗೆದುಕೊಂಡವರು,
ಮನೆಯಲ್ಲಿ ಕುಂತವರು,
ಕೆಲಸಕ್ಕೆ ಬಾರದವರೇ ನಮ್ಮ ಸರ್ಕಾರದ ಬಗ್ಗೆ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾರೆ.
ಒಬ್ಬನೇ ಒಬ್ಬ ವ್ಯಕ್ತಿ ವಿರೋಧ ಪಕ್ಷದ ನಾಯಕ ಸಿಗಲಿಲ್ಲವೇ ಬಿಜೆಪಿಯಲ್ಲಿ?
ನಾಯಕರೇ ಇಲ್ಲದ @BJP4Karnataka ಗೆ ವಿರೋಧ ಪಕ್ಷದ ನಾಯಕ ಸಿಗುವುದಾದರೂ ಎಲ್ಲಿಂದ!