×
Ad

ಹುಬ್ಬಳ್ಳಿ- ಧಾರವಾಡ ಪಾಲಿಕೆ ಬಿಜೆಪಿ ತೆಕ್ಕೆಗೆ; ವೀಣಾ ಭರದ್ವಾಡ ನೂತನ ಮೇಯರ್

Update: 2023-06-20 15:37 IST

ಹುಬ್ಬಳ್ಳಿ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಎರಡನೇ ಬಾರಿಗೆ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಪಾಲಿಕೆಯ 22ನೇ ಅವಧಿಯ ಮೇಯರ್ ಆಗಿ ಬಿಜೆಪಿಯ ವೀಣಾ ಭರದ್ವಾಡ ಆಯ್ಕೆಯಾದರು. ವೀಣಾ ಭರದ್ವಾಡ 46 , ಕಾಂಗ್ರೆಸ್ ನ ಮೇಯರ್ ಅಭ್ಯರ್ಥಿ ಸುವರ್ಣ ಕಲ್ಲಕುಂಟ್ಲ 37 ಮತಗಳನ್ನು ಪಡೆದರು. 

ಉಪ ಮೇಯರ್ ಆಗಿ  ಪಾಲಿಕೆಯ 32 ನೇ ವಾರ್ಡ್ ಬಿಜೆಪಿ ಸದಸ್ಯ ಸತೀಶ ಸುರೇಂದ್ರ ಹಾನಗಲ್ ಅವರು ( 46) ಮತಗಳನ್ನು ಪಡೆಯುವ ಮೂಲಕ ಆಯ್ಕೆ ಆಗಿದ್ದಾರೆ ಎಂದು ಚುನಾವಣಾ ಅಧಿಕಾರಿಯೂ ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ ಪ್ರಕಟಿಸಿದರು. 

ಪಾಲಿಕೆಯಲ್ಲಿ ಬಿಜೆಪಿ 39, ಕಾಂಗ್ರೆಸ್ 33, ಜೆಡಿಎಸ್ 1, ಎಐಎಂಐಎಂ 3 ಹಾಗೂ ಪಕ್ಷೇತರ  6 ಸೇರಿ ಒಟ್ಟು 82 ಸದಸ್ಯರು ಇದ್ದಾರೆ. ಮೇಯರ್ ಸ್ಥಾನ: ಸಾಮಾನ್ಯ ಮಹಿಳೆಗೆ, ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾತಿ ನಿಗದಿಯಾಗಿತ್ತು. 

Similar News