×
Ad

​ಮೀನುಗಾರಿಕಾ ಅಭಿವೃದ್ದಿ ನಿಗಮದ ಅಧಿಕಾರಿಗಳ ಜೊತೆ ಚರ್ಚೆ

Update: 2023-06-20 19:25 IST

ಮಂಗಳೂರು, ಜೂ.20: ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಯ ನಿರ್ದೇಶಕ ಹಾಗೂ ನಿಗಮದ ಅಧ್ಯಕ್ಷರನ್ನಾಗಿ ನೇಮಕಗೊಂಡಿರುವ ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಇತ್ತೀಚೆಗೆ ನಗರದ ಹೊಯ್ಗೆ ಬಜಾರ್‌ನಲ್ಲಿರುವ ನಿಗಮದ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.

ನಿಗಮದ ಕಾರ್ಯ ಚಟುವಟಿಕೆಗಳ ಮಾಹಿತಿ ಪಡೆದ ಅವರು ನಿಗಮವನ್ನು ಲಾಭದತ್ತ ಕೊಂಡೊಯ್ಯಲು ಸಲಹೆ ನೀಡಿದರು.

ರಾಜ್ಯ ವಿಧಾನ ಪರಿಷತ್ ಸದಸ್ಯ ಹರೀಶ್‌ಕುಮಾರ್, ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ. ಗಣೇಶ್, ಪ್ರಧಾನ ವ್ಯವಸ್ಥಾಪಕ ಮಹೇಶ್ ಕುಮಾರ್ ಯು. ಮತ್ತು ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡ ಮಿ ಥುನ್ ರೈ, ಮೀನುಗಾರರ ಮುಖಂಡ ಚೇತನ್ ಬೆಂಗ್ರೆಮ ಮತ್ತಿತರರು ಉಪಸ್ಥಿತರಿದ್ದರು.

Similar News