×
Ad

ಆನ್‌ಲೈನ್ ನಲ್ಲಿ ವಂಚನೆ: ಪ್ರಕರಣ ದಾಖಲು

Update: 2023-06-20 21:04 IST

ಮಂಗಳೂರು, ಜೂ.20: ವಿದ್ಯುತ್ ಬಿಲ್ ಪಾವತಿಗೆ ಸಂಬಂಧಿಸಿದಂತೆ ಆ್ಯಪ್ ಇನ್‌ಸ್ಟಾಲ್ ಮಾಡಿಸಿ 2 ಲ.ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಮುಂಬೈಯಲ್ಲಿರುವ ಮನೆಯ ವಿದ್ಯುತ್ ಬಿಲ್ ಬಾಕಿ ಇದೆ. ಅದನ್ನು ಆನ್‌ಲೈನ್ ಮೂಲಕ ಪಾವತಿ ಮಾಡಲು ಆ್ಯಪ್ ಇನ್‌ಸ್ಟಾಲ್ ಮಾಡುವಂತೆ ತಿಳಿಸಿದ. ಆ್ಯಪ್ ಇನ್‌ಸ್ಟಾಲ್ ಮಾಡಿದ ಬಳಿಕ ಅಪರಿಚಿತ ವ್ಯಕ್ತಿ ಹೇಳಿದ ಮಾಹಿತಿಗಳನ್ನು ಅದರಲ್ಲಿ ನಮೂದಿಸಿದೆ. ಆ ನಂತರ ತನ್ನ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ 2 ಲ.ರೂ. ಬೇರೆ ಖಾತೆಗೆ ವರ್ಗಾವಣೆಯಾಗಿದೆ ಎಂದು ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ.

Similar News