×
Ad

ಚಿಕ್ಕಮಗಳೂರು: ಲಾರಿ- ಬೈಕ್ ಮುಖಾಮುಖಿ ಢಿಕ್ಕಿ; ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

Update: 2023-06-21 11:24 IST

ಚಿಕ್ಕಮಗಳೂರು: ಲಾರಿ ಹಾಗೂ ಬೈಕ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾನ್ನಪ್ಪಿರುವ ಘಟನೆ ತರೀಕೆರೆ ತಾಲೂಕು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಹೊಳೆ ಗೇಟ್ ಬಳಿ  ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತರನ್ನು ತರೀಕೆರೆ ತಾಲೂಕಿನ ಬೇಲೇನಹಳ್ಳಿ ನಿವಾಸಿ ವಿಶ್ವಾಸ್ (24) ಹಾಗೂ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ದೀಪಿಕಾ (22) ಎಂದು ಗುರುತಿಸಲಾಗಿದೆ.

ತರೀಕೆರೆಯಿಂದ ಬೇಲೇನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ.

Similar News