×
Ad

ಜಮ್ಮು–ಕಾಶ್ಮೀರ: ಶಸ್ತ್ರಸಜ್ಜಿತ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ವ್ಯಕ್ತಿಯ ಬಂಧನ

Update: 2023-06-21 14:40 IST

ಜಮ್ಮು: ಜಮ್ಮು -ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಪೊಲೀಸ್ ಸಿಬ್ಬಂದಿಯನ್ನು ನೆಲಕ್ಕೆ ಕೆಡವಿ ಹಲ್ಲೆ ನಡೆಸುತ್ತಿರುವ ವೀಡಿಯೊದಲ್ಲಿ ಕಾಣಿಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಜಿಲ್ಲೆಯ ಸಂಗ್ರಾಮಭಟ ಗ್ರಾಮದ ರಾಕೀನ್ ಝಿಯಾ ಎಂಬಾತನನ್ನು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಕಿಶ್ತ್ವಾರ್) ಖಲೀಲ್ ಪೋಸ್ವಾಲ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ಲಭಿಸಿದ  ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಬೆನ್ನಟ್ಟಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದರು.

ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯ (ಎಆರ್‌ಟಿಒ) ವೈಯಕ್ತಿಕ ಭದ್ರತಾ ಅಧಿಕಾರಿಯಾಗಿ ನೇಮಕಗೊಂಡ ಪೊಲೀಸ್ ಸಿಬ್ಬಂದಿ ತನ್ನ ರಕ್ಷಕನೊಂದಿಗೆ ಝಿಯಾ ಅನುಚಿತವಾಗಿ ವರ್ತಿಸುವುದನ್ನು ತಡೆಯಲು ಪ್ರಯತ್ನಿಸಿದಾಗ ಝೆಲ್ನಾ ಗ್ರಾಮದಲ್ಲಿ ಮಂಗಳವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗಿರುವ ವೀಡಿಯೊದಲ್ಲಿ ಆರೋಪಿಯು ಸಶಸ್ತ್ರ ಪೋಲೀಸರನ್ನು ಒದೆಯುವುದು ಹಾಗೂ  ಹೊಡೆಯುವುದು ಕಂಡುಬಂದಿದೆ, ಪೊಲೀಸ್ ಸಿಬ್ಬಂದಿಯನ್ನು ನೆಲಕ್ಕೆ ಕೆಡವಿದಾಗ ಪ್ರತ್ಯಕ್ಷದರ್ಶಿಗಳು  ತಡೆಯಲು ಪ್ರಯತ್ನಿಸಿದ್ದಾರೆ.

ಬಂಧಿತ ವ್ಯಕ್ತಿಯು  ಕಬ್ಬಿಣದ ರಾಡ್‌ನಿಂದ ಸರಕಾರಿ ವಾಹನಗಳನ್ನು ಹಾನಿಗೊಳಿಸಿದ್ದು, ಸಾರ್ವಜನಿಕ ಆಸ್ತಿಗೆ ಅಪಾರ ನಷ್ಟವನ್ನು ಉಂಟುಮಾಡಿದ್ದಾನೆ ಎಂದು ಅಧಿಕಾರಿ ತಿಳಿಸಿದರು.

Similar News