ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತರಾಗಿ ಮನ್ಸೂರ್ ಅಲಿ ಅಧಿಕಾರ ಸ್ವೀಕಾರ
Update: 2023-06-21 19:04 IST
ಮಂಗಳೂರು, ಜೂ.21: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಆಯುಕ್ತರಾಗಿ ಮನ್ಸೂರ್ ಅಲಿ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ.
ಸಾರ್ವಜನಿಕರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ಕೆಲಸ ಕಾರ್ಯಗಳಿಗೆ ಹಾಗೂ ಕುಂದು ಕೊರತೆಗಳ ಕುರಿತು ಕಚೇರಿ ವೇಳೆಯಲ್ಲಿ ನೇರವಾಗಿ ಸಂಪರ್ಕಿಸಬಹುದು ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಕಟನೆ ತಿಳಿಸಿದೆ.