ಕಾರು ಢಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು
Update: 2023-06-22 20:41 IST
ಕಾಪು, ಜೂ.22: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಜೂ.22ರಂದು ಬೆಳಗ್ಗೆ ಪಾಂಗಾಳ ರಿಕ್ಷಾ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಕಮಲ(81) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು, ರಸ್ತೆ ದಾಟುತ್ತಿದ್ದ ಕಮಲ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.