×
Ad

ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೂ ಕಾಡಸಿದ್ದೇಶ್ವರ ಸ್ವಾಮೀಜಿಗೆ ನಿರ್ಬಂಧ

Update: 2025-10-18 00:31 IST

ಕಾಡಸಿದ್ದೇಶ್ವರ ಸ್ವಾಮೀಜಿ

ಬಾಗಲಕೋಟೆ : ಲಿಂಗಾಯತ ಶ್ರೀಗಳ ಬಗ್ಗೆ ಅವಹೇಳನಾಕಾರಿ ಭಾಷಣ ಹಿನ್ನೆಲೆಯಲ್ಲಿ ಕನೇರಿಯ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗೆ ವಿಜಯಪುರ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧಿಸಲಾಗಿತ್ತು. ಇದೀಗ ಬಾಗಲಕೋಟೆ ಜಿಲ್ಲೆಗೂ ಅವರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಈ ಸಂಬಂಧ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನಲ್ಲಿರುವ ಕನೇರಿ ಶ್ರೀಗಳಿಗೆ ಇದೀಗ ಜಿಲ್ಲಾಧಿಕಾರಿ ನೋಟಿಸ್ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಗೆ ಪ್ರವೇಶ ಮಾಡದಂತೆ ಹಾಗೂ ಚಿಕ್ಕಾಲಗುಂಡಿ ಮಲ್ಲಿಕಾರ್ಜುನ ಮಠಕ್ಕೆ ಬಾರದಂತೆ ನೊಟೀಸ್ ನಲ್ಲಿ ಸೂಚಿಸಲಾಗಿದೆ.

ಜಿಲ್ಲಾಧಿಕಾರಿ ಹೊರಡಿಸಿದ ನೋಟಿಸ್​ ಅನ್ನು ತಹಶೀಲ್ದಾರ್‌ ವಿನೋದ್ ಅವರು ಬೀಳಗಿ ತಾಲೂಕಿನ ಚಿಕ್ಕಾಲಗುಂಡಿ ಗ್ರಾಮದಲ್ಲಿರುವ ಮಠಕ್ಕೆ ತೆರಳಿ ಕನೇರಿಯ ಕಾಡಸಿದ್ದೇಶ್ವರ ಶ್ರೀಗಳಿಗೆ ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇದೆ. ಹೀಗಾಗಿ ಬಾಗಲಕೋಟೆಯಲ್ಲಿ ಜಿಲ್ಲೆಯಲ್ಲಿ ಇರಬಾರದು. ನಿಮ್ಮ ಮೂಲ ಜಾಗಕ್ಕೆ ತೆರಳಿ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News