ಸಕಲ ಸರಕಾರಿ ಗೌರವಗಳೊಂದಿಗೆ ಎಚ್.ವೈ.ಮೇಟಿ ಅಂತ್ಯಕ್ರಿಯೆ
Update: 2025-11-05 20:25 IST
ಬಾಗಲಕೋಟೆ : ಅನಾರೋಗ್ಯದ ಹಿನ್ನೆಲೆಯಲ್ಲಿ ಮೃತಪಟ್ಟ ಮಾಜಿ ಸಚಿವ, ಹಿರಿಯ ಶಾಸಕ ಎಚ್.ವೈ. ಮೇಟಿ(79) ಅವರ ಅಂತ್ಯ ಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ತಿಮ್ಮಾಪುರದಲ್ಲಿ ನೆರವೇರಿಸಲಾಯಿತು.
ಮೇಟಿ ಅವರ ಪೋಷಕರ ಸಮಾಧಿ ಪಕ್ಕದಲ್ಲೆ ಕುರುಬ ಸಮುದಾಯದ ಸಂಪ್ರದಾಯದಂತೆ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಿದರು. ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಮೇಟಿ ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಎಂ.ಬಿ.ಪಾಟೀಲ್, ಆರ್.ಬಿ.ತಿಮ್ಮಾಪುರ್, ಡಾ.ಎಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹೀಂ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.