×
Ad

ಬಾಗಲಕೋಟೆ | ಕಲ್ಲು ತೂರಾಟ ಖಂಡಿಸಿ ಫೆ.26ರಂದು ಪ್ರತಿಭಟನಾ ಜಾಥಾ'

ಹಿಂದುತ್ವ ಸಂಘಟನೆ, ಬಿಜೆಪಿಯ ನಾಯಕರ ನೇತೃತ್ವದಲ್ಲಿ ಸಭೆ ನಿರ್ಧಾರ

Update: 2026-02-23 15:28 IST

ಬಾಗಲಕೋಟೆ : ಶಿವಾಜಿ ಜಯಂತಿ ಅಂಗವಾಗಿ ನಡೆದ ಮೆರವಣಿಗೆ ವೇಳೆ ಉಂಟಾದ ಕಲ್ಲು ತೂರಾಟದ ಹಿನ್ನೆಲೆಯಲ್ಲಿ ವಿವಿಧ ಹಿಂದುತ್ವ ಸಂಘಟನೆಗಳ ಮುಖಂಡರು ಹಾಗೂ ಬಿಜೆಪಿಯ ನಾಯಕರ ನೇತೃತ್ವದಲ್ಲಿ ಸಭೆ ನಡೆಯಿತು.

ಫೆ.26ರಂದು ಬಾಗಲಕೋಟೆ ಚಲೋ ನಡೆಸಲು ನಿರ್ಧರಿಸಲಾಯಿತು. ಕಲ್ಲು ತೂರಾಟ ನಡೆದೆ ಅದೇ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಜಿಲ್ಲೆಯ ಎಲ್ಲಾ ತಾಲೂಕಿನಿಂದ ಮುಖಂಡರು ಭಾಗವಹಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಶಿವಾಜಿ ಜಯಂತ್ಯೋತ್ಸವ ಕಾರ್ಯಕ್ರಮ ಮರು ಆಯೋಜನೆ ಮಾಡಿ, ಶೋಭಾಯಾತ್ರೆ ಹಮ್ಮಿಕೊಳ್ಳುವ ಬಗ್ಗೆ ನಿರ್ಧಾರ ಮಾಡಲಾಯಿತು.

ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಮಸೀದಿಯ ಅಧ್ಯಕ್ಷರು ಹಾಗೂ ಕಮಿಟಿಯ ಸದಸ್ಯರ ಮೇಲೆ ಕ್ರಮ ಜರುಗಿಸಬೇಕು. ನಿಷೇದಾಜ್ಞೆಯನ್ನು ತಕ್ಷಣದಿಂದ ಹಿಂಪಡೆಯಬೇಕು. ಜನಸಾಮಾನ್ಯರ ಓಡಾಟ ಸುಗಮಗೊಳಿಸಬೇಕು. ಬಂಧಿಸಿರುವ ಸಂಘ ಪರಿವಾರದ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು. ಕಲ್ಲು ತೂರಾಟ ಸಮಯದಲ್ಲಿ ಮಸೀದಿಯಲ್ಲಿ ಸೇರಿದ್ದ ಎಲ್ಲ ಜನರಿಗೆ ಬಂಧನ ಮಾಡಬೇಕು ಎಂದು ಒತ್ತಾಯಿಸಲಾಯಿತು. ಈ ಬಗ್ಗೆ ಪ್ರತಿಭಟನೆ ಮಾಡಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ಮುಖಂಡ ಅಶೋಕ ಲಿಂಬಾವಳಿ ಸಭೆಯ ಬ ಗ್ಗೆ ಮಾಹಿತಿ ನೀಡಿದರು.

ನಗರದ ಚರಂತಿಮಠ ಶಿವಾನುಭವ ಮಂಟಪದಲ್ಲಿ ನಡೆದ ಸಭೆಯಲ್ಲಿ ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ, ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣ ಸಾ ಭಾಂಡೆಗೆ ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಮತ್ತಿತರರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News