×
Ad

ಬಾಗಲಕೋಟೆ | ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ, ವ್ಯಕ್ತಿ ಸಜೀವದಹನ

Update: 2024-05-11 21:25 IST

ಸಾಂದರ್ಭಿಕ ಚಿತ್ರ

ಬಾಗಲಕೋಟೆ : ಕಾರಿವೊಂದಕ್ಕೆ ಬೆಂಕಿ ಹತ್ತಿಕೊಂಡ ಪರಿಣಾಮ ವ್ಯಕ್ತಿಯೊಬ್ಬರು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಇಂಗಳಗಿ ಗ್ರಾಮದ ಬಳಿ ಶನಿವಾರ ನಡೆದಿರುವುದಾಗಿ ವರದಿಯಾಗಿದೆ.

ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಕಾರು ಸುಟ್ಟು ಕರಗಲಾಗಿದ್ದು, ಕಾರಿನಲ್ಲಿದ್ದ ಚಿಕ್ಕಮಾಗಿ ಗ್ರಾಮದ ಸಂಗನಗೌಡ ಗೌಡರ (48) ಮೃತಪಟ್ಟಿದ್ದಾರೆ. ತಾಂತ್ರಿಕ ದೋಷದಿಂದ ಕಾರಿಗೆ ಬೆಂಕಿ ಹತ್ತಿಕೊಂಡಿರುವ ಶಂಕಿ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೋಲಿಸರು ಭೇಟಿ ನೀಡಿ ಪರೀಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News