×
Ad

ಬಾಗಲಕೋಟೆ | ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ ಇಬ್ಬರು ಮೃತ್ಯು

Update: 2025-06-22 13:38 IST

ಸಾಂದರ್ಭಿಕ ಚಿತ್ರ

ಬಾಗಲಕೋಟೆ : ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ ಇಬ್ಬರು ಮೃತ ಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಲಕಲ್‌ ತಾಲೂಕಿನ ಚಿಕನಾಳ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಕೊಪ್ಪಳ ಜಿಲ್ಲೆ ಬಳೂಟಗಿ ಗ್ರಾಮದ ನಿವಾಸಿ ಮಂಜುನಾಥ ಬಾಲಪ್ಪ ಬಂಡಿ(13) ಚಿಕನಾಳ ಗ್ರಾಮದ ನಿವಾಸಿ ಷಣ್ಮುಖಪ್ಪ ನಿಲಪ್ಪ ತಿಪ್ಪಣ್ಣವರ (30) ಮೃತರು ಎಂದು ತಿಳಿದು ಬಂದಿದೆ

ಹಳ್ಳದಲ್ಲಿ ಕಾಲು ಜಾರಿ ಬಿದ್ದ ಬಾಲಕನ್ನು ರಕ್ಷಿಸಲು ಹೋಗಿ ಯುವಕ ಕೂಡ ಮೃತಪಟ್ಟಿದ್ದಾನೆ ಎನ್ನಲಾಗಿದೆ. ನೀರುಪಾಲಾದ ಇಬ್ಬರ ಮೃತ ದೇಹವನ್ನು ಹೂರಗೆ ತೆಗೆದು, ಗುಡೂರ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಕಳಿಸಲಾಗಿದೆ.

ಈ ಸಂಬಂಧ ಅಮೀನಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News