×
Ad

Bagalkot | ಶಾಲೆಯ ಗೇಟ್ ಮುರಿದು ಬಿದ್ದು ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Update: 2026-07-06 20:32 IST

ಬಾಗಲಕೋಟೆ : ಸರಕಾರಿ ಶಾಲೆಯ ಮುಖ್ಯ ದ್ವಾರದ ಗೇಟ್ ಮುರಿದು ಬಿದ್ದು ನಾಲ್ಕು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಇಲಕಲ್ಲ ತಾಲೂಕಿನ ಬಲಕುಂದಿ ಗ್ರಾಮದಲ್ಲಿ ನಡೆದಿದೆ.

ಬಲಕುಂದಿ ಗ್ರಾಮದಲ್ಲಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ದ್ವಾರಕ್ಕೆ ಕಬ್ಬಿಣ ಗೇಟ್ ಅಳವಡಿಸಲಾಗಿತ್ತು. ನಾಲ್ವರು ವಿದ್ಯಾರ್ಥಿಗಳು ಆಟ ಆಡುತ್ತಿದ್ದ ಸಮಯದಲ್ಲಿ ಗೇಟ್ ಮುರಿದು ಬಿದ್ದಿದೆ.

ಘಟನೆಯಿಂದ ನಾಲ್ವರು ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಮೂರನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದ್ದು, ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News