BAGALKOTE : ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ
Update: 2026-02-26 14:58 IST
ಬಾಗಲಕೋಟೆ : ಇತ್ತೀಚೆಗೆ ಶಿವಾಜಿ ಶಿಜಯಂತಿ ಅಂಗವಾಗಿ ಆಯೋಜಿಸಿದ್ದ ಮೆರವಣಿಗೆ ವೇಳೆ ಉಂಟಾದ ಕಲ್ಲು ತೂರಾಟ ಘಟನೆಯನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ನವನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಯಿತು.
ಸಂಸದರಾದ ಪಿ.ಸಿ.ಗದ್ದಿಗೌಡರ ಹಾಗೂ ನಾರಾಯಣ ಸಾ ಭಾಂಡೆಗೆ, ಶಾಸಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಹಿಂದೂ ಜಾಗರಣ ವೇದಿಕೆಯ ಮುಖಂಡರಾದ ವಸಂತ, ಶ್ರೀಕಾಂತ ಹೊಸಕೇರಿ ಸೇರಿದಂತೆ ಇತರ ಮುಖಂಡರು ಭಾಗಿಯಾಗಿದ್ದಾರೆ.
ಮಸೀದಿ ಬಳಿಯಿಂದ ಕಲ್ಲು ತೂರಾಟ ಆಗಿದ್ದರಿಂದ ಮಸೀದಿ ಆಡಳಿತ ಸಮಿತಿಯ ಪದಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ಪ್ರತಿಭಟನಾಕಾರರು, ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.