×
Ad

ಬಾಗಲಕೋಟೆ: ಶಾಲಾ ಬಸ್-ಟ್ರ್ಯಾಕ್ಟರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳು ಮೃತ್ಯು

Update: 2024-01-29 08:21 IST

ಬಾಗಲಕೋಟೆ: ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ಢಿಕ್ಕಿಯಾಗಿ ನಾಲ್ವರು ವಿದ್ಯಾರ್ಥಿಗಳು ಮೃಪಟ್ಟಿದ್ದು, ಎಂಟಕ್ಕೂ ಅಧಿಕ ಮಕ್ಕಳು ಗಾಯಗೊಂಡಿರುವ ಘಟನೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ರವಿವಾರ ತಡರಾತ್ರಿ ನಡೆದಿದೆ .

ಮೃತ ವಿದ್ಯಾರ್ಥಿಗಳನ್ನು ಕವಟಗಿ ಗ್ರಾಮದ ಸಾಗರ ಕಡಕೋಳ (17), ಶ್ವೇತಾ (13), ಗೋವಿಂದ (13), ಬಸವರಾಜ (17) ಎಂದು ಗುರುತಿಸಲಾಗಿದೆ.

ಆಲಗೂರು ಗ್ರಾಮದ ಬಳಿ ಇರುವ ಶ್ರೀ ವರ್ಧಮಾನ ಮಾಹವೀರ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಗಳು, ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ಕವಟಗಿ ಗ್ರಾಮದ ಕಡೆ ಶಾಲಾ ಬಸ್ನಲ್ಲಿ ಹೊರಡುವಾಗ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News