×
Ad

ಪ್ರಮೋದ್ ಮುತಾಲಿಕ್, ಪುನೀತ್ ಕೆರೆಹಳ್ಳಿಗೆ ಬಾಗಲಕೋಟೆ ಜಿಲ್ಲೆಗೆ ಪ್ರವೇಶ ನಿರ್ಬಂಧ

Update: 2026-02-21 22:22 IST

ಬಾಗಲಕೋಟೆ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರೆಹಳ್ಳಿಗೆ ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೆ ಶುಕ್ರವಾರದಿಂದ ಒಂದು ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಫೆ.21ರಿಂದ ಮಾ. 21ರ ವರೆಗೆ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರೆಹಳ್ಳಿಗೆ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಸಾರ್ವಜನಿಕ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಈ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಪೊಲೀಸರ ಕರ್ತವ್ಯಕ್ಕೆ ಅಡ್ಡಿ‌ ಆರೋಪ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಗುರುವಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ನಗರದ ಮಾರುಕಟ್ಟೆಯ ಹತ್ತಿರ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿ ಇಬ್ಬರ ವಿರುದ್ಧ ಬಾಗಲಕೋಟೆ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಎಸ್ಪಿ ಸಿದ್ದಾರ್ಥ ಗೋಯಲ್, ಬಾಗಲಕೋಟೆಯ ಅಶೋಕ ಬಾರಕೇರ ಹಾಗೂ ಸಿದ್ಧಪ್ಪ ಘೇರಡೆ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ. ಅಶೋಕ ಕಲ್ಲು ತೂರಿ ಓಡಿ ಹೋಗುವಾಗ ಬಿದ್ದು ಗಾಯಮಾಡಿಕೊಂಡಿದ್ದು, ನಮ್ಮ ಸಿಬ್ಬಂದಿ ಅವರಿಗೆ ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News