×
Ad

ಕೋಲಾರ : ಓವರ್‌ಟೇಕ್ ವೇಳೆ ಕಾರಿಗೆ ಢಿಕ್ಕಿ ಹೊಡೆದು ನದಿಗೆ ಉರುಳಿದ ಟಿಪ್ಪರ್; ಚಾಲಕ ಮೃತ್ಯು

Update: 2026-07-03 14:38 IST

ಬಾಗಲಕೋಟೆ, ಜು.3: ಓವರ್‌ಟೇಕ್ ಮಾಡುವ ವೇಳೆ ಕಾರಿಗೆ ಢಿಕ್ಕಿ ಹೊಡೆದ ಟಿಪ್ಪರ್ ಕೊರ್ತಿ–ಕೋಲ್ಹಾರ ಸೇತುವೆ ಮೇಲಿಂದ ಕೃಷ್ಣಾ ನದಿಗೆ ಉರುಳಿದ ಪರಿಣಾಮ ಚಾಲಕ ಮೃತಪಟ್ಟಿರುವ ಘಟನೆ ಕೋಲಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ನಡೆದಿದೆ.

ಮೃತ ಚಾಲಕನನ್ನು ಸಂತೋಷ ಕೋಟಿ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಟಿಪ್ಪರ್ ಕೃಷ್ಣಾ ನದಿಗೆ ಬಿದ್ದಿದ್ದು, ಅದರೊಳಗೆ ಚಾಲಕ ಸಿಲುಕಿಕೊಂಡಿದ್ದರು. ಘಟನೆಯ ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದರು.

ಶುಕ್ರವಾರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ನದಿಯಿಂದ ಟಿಪ್ಪರ್ ಅನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾದರು. ಇದೇ ವೇಳೆ ಟಿಪ್ಪರ್‌ನೊಳಗೆ ಸಿಲುಕಿದ್ದ ಚಾಲಕ ಸಂತೋಷ ಕೋಟಿ ಅವರ ಮೃತದೇಹವನ್ನು ಹೊರತೆಗೆಯಲಾಗಿದೆ.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News