×
Ad

ವಿಜಯೇಂದ್ರಗೆ ಅನುಭವದ ಕೊರತೆಯಿದ್ದು, ಅವರು ಎಲ್ಲರೊಂದಿಗೆ ಚರ್ಚಿಸಬೇಕು: ಮುರುಗೇಶ್ ನಿರಾಣಿ

Update: 2025-02-08 00:18 IST

ಬಾಗಲಕೋಟೆ : ವಿಜಯೇಂದ್ರ ಅವರಿಗೆ ಅನುಭವದ ಕೊರತೆಯಿದ್ದು, ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ. ಅವರು ಎಲ್ಲರೊಂದಿಗೆ ಚರ್ಚಿಸಬೇಕು ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಚಿವರಾಗಿ ಅನುಕೂಲ ಪಡೆದವರು ಮಾತನಾಡುತ್ತಿಲ್ಲ ಎಂಬ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾವುದೇ ಗುಂಪಿನಲ್ಲಿಲ್ಲ. ನನ್ನದು ಬಿಜೆಪಿ ಗುಂಪು. ಮಗನ ಕೊಡುಗೆ ಏನು ಎನ್ನುವುದು ಬೇಕು. ಬೀಳಗಿ ಜನ ನನ್ನನ್ನು ಗೆಲ್ಲಿಸಿದ್ದಾರೆ ಮತ್ತು ಸೋಲಿಸಿದ್ದಾರೆ. ನಾನು ಯಾರನ್ನೂ ದೂರುವುದಿಲ್ಲ ಎಂದು ಹೇಳಿದರು.

ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಆದರೆ, ಜವಾಬ್ದಾರಿ ವಹಿಸಿದರೆ ನಿರ್ವಹಿಸುವೆ. ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯವ ಸಾಮರ್ಥ್ಯವಿದೆ. ಅಲ್ಲದೆ, ಈ ಹಿಂದೆ ಬಿಜೆಪಿ ರಾಜ್ಯ ಉಪಾಧ್ಯಕ್ಷ,  ಸಚಿವ ಸ್ಥಾನ ಎರಡನ್ನೂ ಯಶಸ್ವಿಯಾಗಿ ನಿಭಾಯಿಸಿದ್ದೇನೆ’ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News